Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿ ಬಿದ್ದಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜಗಾತ್ ಕೊನ್ ತರ್ ಎಕ್ಲೊ ಸಾವ್ಕಾರ್ ರ್‍ಹಾತಾ ಅನಿ ತೊ ಭಾವ್ ನಾತರ್ ಭೆನ್ ಗರ್ಜೆತ್ ಹೊತ್ತೆ ಬಗ್ತಾ, ಅನಿ ತೆಚ್ಯಾ ಗರ್ಜೆಕ್ ಪಾಯ್ನಾ, ತೆಚ್ಯಾಕ್ಡೆ ದೆವಾಚೊ ಪ್ರೆಮ್ ಕಸೊ ರ್‍ಹಾವ್ಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:17
17 ತಿಳಿವುಗಳ ಹೋಲಿಕೆ  

ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.


ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?


ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು ಹೇಳಿದರೆ ಪ್ರಯೋಜನವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು