Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪ್ರಿಯರೇ, ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸದಿದ್ದರೆ, ನಾವು ದೇವರ ಮುಂದೆ ಧೈರ್ಯದಿಂದಿರಲು ಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ನಿರ್ಣಯಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಧೈರ್ಯವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನ ಪ್ರಿಯ ಸ್ನೇಹಿತರೇ, ನಾವು ತಪ್ಪು ಮಾಡುತ್ತಿಲ್ಲ ಎಂದು ನಮಗೆ ತಿಳಿದಿದ್ದರೆ, ನಾವು ದೇವರ ಬಳಿಗೆ ಧೈರ್ಯವಾಗಿ ಬರಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸದಿದ್ದರೆ ದೇವರ ಮುಂದೆ ಆತ್ಮವಿಶ್ವಾಸ ನಮಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಪ್ರೆಮಾಚ್ಯಾನು, ಅಮ್ಚ್ಯಾ ಭುತ್ತುರ್ಲ್ಯಾ ಮನಾನ್ ಅಮ್ಕಾ ಚುಕಿದಾರ್ ಮನುನ್ ನಿರ್ಧಾರ್ ಕರುಕ್ ನಸ್ಲ್ಯಾರ್, ಅಮಿ ಧೈರ್ಯಾನ್ ದೆವಾಚ್ಯಾ ಇದ್ರಾಕ್ ರ್‍ಹಾವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:21
17 ತಿಳಿವುಗಳ ಹೋಲಿಕೆ  

ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.


ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.


ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ದೇವರ ಅಭಿಮುಖನಾಗಿರುವೆ.


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.


ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರಿಯಲ್ಲಿಯೂ, ಮನಸ್ಸಾಕ್ಷಿಯು ತಪ್ಪು ತೋರಿಸುವುದಿಲ್ಲ.


ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು.


ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.


ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು