Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನಲ್ಲಿ ನೆಲೆಗೊಂಡಿರುವವನು ಪಾಪವನ್ನುಮಾಡುವುದಿಲ್ಲ; ಪಾಪಮಾಡುವವನು ಆತನನ್ನು ನೋಡಿಲ್ಲ, ತಿಳಿದೂ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರಲ್ಲಿ ನೆಲೆಸಿರುವ ಪ್ರತಿಯೊಬ್ಬನೂ ಪಾಪಮಾಡನು. ಪಾಪಮಾಡುವವನು ಅವರನ್ನು ಕಂಡವನೂ ಅಲ್ಲ, ಅರಿತವನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಕ್ರಿಸ್ತನಲ್ಲಿ ನೆಲಸಿರುವ ವ್ಯಕ್ತಿಯು ಪಾಪದಲ್ಲೇ ಮುಂದುವರಿಯುವುದಿಲ್ಲ. ಪಾಪವನ್ನು ಮಾಡುತ್ತಲೇ ಇರುವವನು ಆತನನ್ನು ಎಂದೂ ಅರ್ಥಮಾಡಿಕೊಂಡವನಲ್ಲ ಮತ್ತು ಎಂದೂ ತಿಳಿದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕ್ರಿಸ್ತ ಯೇಸುವಿನಲ್ಲಿ ನೆಲೆಗೊಂಡಿರುವವರು ಪಾಪದಲ್ಲಿ ಮುಂದುವರಿಯುವುದಿಲ್ಲ. ಪಾಪದಲ್ಲಿ ಮುಂದುವರೆಯುವವರು ಕ್ರಿಸ್ತ ಯೇಸುವನ್ನು ಕಂಡವರೂ ಅಲ್ಲ, ತಿಳಿದವರೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಸೆ ರ್‍ಹಾತಾನಾ ತೆಚ್ಯಾ ಕಡೆ ಜಿವನ್ ಕರ್ತಲೊ ಕೊನ್ಬಿ ಪಾಪ್ ಕರಿನಾ, ಪಾಪ್ ಕರ್ತಲ್ಯಾ ಮಾನ್ಸಾಕ್ಡೆ ದೆವಾಕ್ ಬಗುಕ್ ಹೊಯ್ನಾ ಅನಿ ತೆಕಾ ದೆವಾಚಿ ವಳಕ್ಬಿ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:6
11 ತಿಳಿವುಗಳ ಹೋಲಿಕೆ  

ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು.


ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.


ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು