Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪಾಪಮಾಡುವವನು ಸೈತಾನನಿಂದ ಹುಟ್ಟಿದವನಾಗಿದ್ದಾನೆ; ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನಲ್ಲಾ. ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜೆ ಕೊನ್ ಪಾಪ್ ಕರ್ತಾ, ತೊ ಸೈತಾನಾಕ್ ಸಮಂದ್ ಪಡಲ್ಲೊ, ಕಶ್ಯಾಕ್ ಮಟ್ಲ್ಯಾರ್ ಅದ್ದಿಚ್ಯಾನುಚ್ ಸೈತಾನ್ ಪಾಪ್ ಕರಿತ್ ಹಾಯ್, ತನ್ನಾ ಸೈತಾನಾಚಿ ಕಾಮಾ ನಾಸ್ ಕರುಕ್ ಮನುನ್ ದೆವಾಚೊ ಲೆಕ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:8
26 ತಿಳಿವುಗಳ ಹೋಲಿಕೆ  

ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.


ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು


ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.


ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.


ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.


ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.


ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.


ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.


ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ ರಾಜ್ಯದ ಮಕ್ಕಳು.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.


ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.


ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,


ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.


ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು