Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪ್ರಿತಿಚ್ಯಾನು, ಹ್ಯಾ ಜಗಾತ್ ಝುಟಿ ಶಿಕಾಪಾ ಶಿಕ್ವುತಲೆ ಯೆಲ್ಲ್ಯಾ ವೈನಾ, ತುಮಿ ಸಗ್ಳ್ಯಾ ಆತ್ಮ್ಯಾಚಿ ಗೊಸ್ಟಿಚ್ಯಾ ವರ್ತಿ ವಿಶ್ವಾಸ್ ಕರಿನಸ್ತಾನಾ, ತುಮಿ ದೆವಾಚ್ಯಾ ಆತ್ಮ್ಯಾಕ್ನಾ ಯೆಲ್ಲಿ ಗೊಸ್ಟಿಯಾ ಹೊಯ್ಕಿ ನಾ, ಮನುನ್ ಪರಿಕ್ಷಾ ಕರುನ್ ಬಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:1
29 ತಿಳಿವುಗಳ ಹೋಲಿಕೆ  

ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.


ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.


ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.


ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.


ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ಇಬ್ಬರು ಮೂವರು ಪ್ರವಾದಿಗಳು ಮಾತನಾಡಲಿ, ಮಿಕ್ಕಾದವರು ವಿವೇಚನೆಯಿಂದ ಕೇಳಲಿ.


ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.


“ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ?


ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.


ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.


ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.


ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.


“ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.


ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.


ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.


ಪ್ರವಾದನೆಗಳನ್ನು ಹಿನೈಸಬೇಡಿರಿ.


ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.


ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ.


ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು