Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮನುಷ್ಯರು ಕೊಡುವ ಸಾಕ್ಷ್ಯವನ್ನು ನಾವು ಅಂಗೀಕರಿಸುತ್ತೇವೆ. ದೇವರು ನೀಡುವ ಸಾಕ್ಷ್ಯ ಅದಕ್ಕಿಂತಲೂ ಶ್ರೇಷ್ಠವಾದುದು. ದೇವರ ಈ ಸಾಕ್ಷ್ಯ ಅವರ ಪುತ್ರನನ್ನು ಕುರಿತದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುತ್ತೇವಲ್ಲಾ; ದೇವರ ಸಾಕ್ಷಿಯು ಅದಕ್ಕಿಂತ ವಿಶೇಷವಾಗಿದೆ. ದೇವರು ಕೊಟ್ಟ ಸಾಕ್ಷಿ ಏನಂದರೆ ಆತನು ತನ್ನ ಮಗನ ವಿಷಯದಲ್ಲಿ ಹೇಳಿದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನರು ಸಾಕ್ಷಿ ಹೇಳಿದಾಗ ನಾವು ನಂಬುತ್ತೇವೆ. ಆದರೆ ದೇವರ ಸಾಕ್ಷಿಯು ಅದಕ್ಕಿಂತಲೂ ವಿಶೇಷವಾಗಿದೆ. ದೇವರು ತನ್ನ ಸ್ವಂತ ಮಗನ ಕುರಿತು ಹೇಳಿದ ಸತ್ಯವೇ ಆತನು ನಮಗೆ ನೀಡಿದ ಸಾಕ್ಷಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವುದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಏಕೆಂದರೆ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮಿ ಮಾನ್ಸಾಚಿ ಸಾಕ್ಷಿ ಅಮಿ ಮಾನುನ್ ಘೆತಾಂವ್, ತಸೆಚ್ ದೆವಾಚಿ ಸಾಕ್ಷಿ ಮೊಟಿ, ಕಶ್ಯಾಕ್ ಮಟ್ಲ್ಯಾರ್, ದೆವಾನ್ ತೆಚ್ಯಾ ಲೆಕಾಚ್ಯಾ ವಿಶಯಾತ್ ಸಾಕ್ಷಿ ದಿಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:9
13 ತಿಳಿವುಗಳ ಹೋಲಿಕೆ  

ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.


ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.


ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು.


ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.


ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.


ಆತ್ಮ, ನೀರು, ರಕ್ತ ಎಂಬ ಮೂರು ಸಾಕ್ಷಿಗಳುಂಟು. ಈ ಮೂರು ಒಂದೇ ಅಭಿಪ್ರಾಯವನ್ನು ಒಪ್ಪಿಕೊಳ್ಳುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು