1 ಸಮುಯೇಲ 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು. ಅಧ್ಯಾಯವನ್ನು ನೋಡಿ |