1 ಸಮುಯೇಲ 1:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮಾರನೆಯ ದಿನ ಬೆಳಿಗ್ಗೆ ಅವರೆಲ್ಲರು ಎದ್ದು ಸರ್ವೇಶ್ವರನನ್ನು ಆರಾಧಿಸಿ ರಾಮಾದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆ ಸರ್ವೇಶ್ವರನ ಅನುಗ್ರಹದಿಂದ ಗರ್ಭಿಣಿ ಆದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಎಲ್ಕಾನನ ಕುಟುಂಬದವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ, ರಾಮಾತಯಿಮಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಎಲ್ಕಾನನು ಹನ್ನಳನ್ನು ಕೂಡಿದನು. ಯೆಹೋವನು ಹನ್ನಳನ್ನು ಜ್ಞಾಪಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ಉದಯದಲ್ಲಿ ಎದ್ದು, ಯೆಹೋವ ದೇವರನ್ನು ಆರಾಧಿಸಿ, ಹಿಂದಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಸಂಗಮಿಸಲು, ಆಗ ಯೆಹೋವ ದೇವರು ಅವಳನ್ನು ಜ್ಞಾಪಕಮಾಡಿಕೊಂಡರು. ಅಧ್ಯಾಯವನ್ನು ನೋಡಿ |