Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹನ್ನಳು, “ಮಗನು ಮೊಲೆಬಿಡುವವರೆಗೂ ನಾನು ಬರುವುದಿಲ್ಲ; ಅವನು ಸರ್ವೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಬಾಳಿನುದ್ದಕ್ಕೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುತ್ತೇನೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮಗನು ಮೊಲೆಬಿಡುವವರೆಗೂ ನಾನು ಬರುವದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುವೆನು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಹನ್ನಳು ಹೋಗಲಿಲ್ಲ. ಅವಳು ಎಲ್ಕಾನನಿಗೆ, “ಮಗುವು ಗಟ್ಟಿಯಾದ ಊಟಮಾಡುವ ತನಕ ನಾನು ಬರುವುದಿಲ್ಲ. ಅವನು ದೊಡ್ಡವನಾದ ಮೇಲೆ ನಾನೇ ಶೀಲೋವಿಗೆ ಕರೆದೊಯ್ದು ಯೆಹೋವನಿಗೆ ಒಪ್ಪಿಸುತ್ತೇನೆ. ಅವನು ನಾಜೀರನಾಗುತ್ತಾನೆ. ಅವನು ಯಾವಾಗಲೂ ಶೀಲೋವಿನಲ್ಲಿಯೇ ಇರುತ್ತಾನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹನ್ನಳು ಹೋಗದೆ ತನ್ನ ಗಂಡನಿಗೆ, “ಮಗುವು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ನಾನು ಬರುವುದಿಲ್ಲ. ಅವನು ಯೆಹೋವ ದೇವರ ಸನ್ನಿಧಿಯ ದರ್ಶನಕ್ಕೂ ಅಲ್ಲಿ ಎಂದೆಂದಿಗೂ ಇರುವುದಕ್ಕೂ ನಾನು ಅವನನ್ನು ಆಮೇಲೆ ತೆಗೆದುಕೊಂಡು ಬರುವೆನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:22
17 ತಿಳಿವುಗಳ ಹೋಲಿಕೆ  

ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.


“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.


ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.


ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.


ಅನಂತರ ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.


“‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.


ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.


ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.


ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.


ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.


ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.


“ಹೌದು ನಿನ್ನ ದಾಸನ ಸಾಹಸವು ಗೊತ್ತಾಗುವುದು” ಅಂದನು. ಆಕೀಷನು ಅವನಿಗೆ, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುವೆನು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು