1 ಸಮುಯೇಲ 1:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಹನ್ನಳು ಏಲಿಗೆ, “ಸ್ವಾಮೀ, ನಿಮ್ಮ ಜೀವದಾಣೆ, ಹಿಂದೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿಮ್ಮ ಹತ್ತಿರ ನಿಂತಿದ್ದ ಮಹಿಳೆ ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹನ್ನಳು ಏಲಿಗೆ - ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಹನ್ನಳು, “ಸ್ವಾಮೀ, ನನ್ನನ್ನು ಕ್ಷಮಿಸಿ. ನಿಮ್ಮ ಬಳಿ ನಿಂತಿರುವ ನಾನೇ ಅಂದು ಯೆಹೋವನಿಗೆ ಪ್ರಾರ್ಥನೆ ಮಾಡಿದವಳು. ನಾನು ಹೇಳುತ್ತಿರುವುದು ನಿಜವೆಂದು ಪ್ರಮಾಣ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ಇಲ್ಲಿ ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು. ಅಧ್ಯಾಯವನ್ನು ನೋಡಿ |
ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.