Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೇ ಪ್ರತಿಷ್ಠಿತನು,” ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರಸ್ವಾಮಿಯನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು ಎಂದು ಹೇಳಿದಳು. ಆಮೇಲೆ ಅವರು ಯೆಹೋವನಿಗೆ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈಗ ನಾನು ಈ ಮಗನನ್ನು ಯೆಹೋವನಿಗೆ ಒಪ್ಪಿಸುತ್ತೇನೆ. ಇವನು ಜೀವದಿಂದಿರುವ ತನಕ ಯೆಹೋವನಿಗೆ ಪ್ರತಿಷ್ಠಿತನಾಗಿರುತ್ತಾನೆ” ಎಂದು ಏಲಿಗೆ ಹೇಳಿದಳು. ಬಳಿಕ ಹನ್ನಳು ಆ ಬಾಲಕನನ್ನು ಅಲ್ಲಿಯೇ ಬಿಟ್ಟು ಯೆಹೋವನನ್ನು ಆರಾಧಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ನಾನು ಅವನನ್ನು ಯೆಹೋವ ದೇವರಿಗೆ ಒಪ್ಪಿಸಿದ್ದೇನೆ. ಅವನು ಜೀವಿಸಿರುವವರೆಗೆ ಯೆಹೋವ ದೇವರಿಗೆ ಸಮರ್ಪಿತನಾಗಿರುವನು,” ಎಂದಳು. ಆಮೇಲೆ ಅವರೆಲ್ಲರೂ ಅಲ್ಲಿ ಯೆಹೋವ ದೇವರನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:28
12 ತಿಳಿವುಗಳ ಹೋಲಿಕೆ  

ಆ ಮನುಷ್ಯನು ಇದನ್ನು ಕೇಳಿ ಅಡ್ಡಬಿದ್ದು ಯೆಹೋವನಿಗೆ ನಮಸ್ಕರಿಸಿ,


ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು.


ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.


“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು.


“ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು” ಎಂದು ಹೇಳಿದಳು.


ಅನಂತರ ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.


“ಹೌದು ನಿನ್ನ ದಾಸನ ಸಾಹಸವು ಗೊತ್ತಾಗುವುದು” ಅಂದನು. ಆಕೀಷನು ಅವನಿಗೆ, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುವೆನು” ಅಂದನು.


ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳೆಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು.


ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.


ಏಲಿಯು ಎಲ್ಕಾನನಿಗೆ, “ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.


ಏನು, ಕಂದಾ? ನನ್ನ ಗರ್ಭಪುತ್ರನೇ, ಏನು, ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು