1 ಸಮುಯೇಲ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎಲ್ಕಾನನು ಪ್ರತಿ ವರ್ಷ ರಾಮಾದಿಂದ ಶಿಲೋವಿಗೆ ಹೋಗಿ ಸೇನಾಧೀಶ್ವರರಾದ ಸರ್ವೇಶ್ವರಸ್ವಾಮಿಗೆ ಬಲಿದಾನವನ್ನು ಸಮರ್ಪಿಸಿ ಆರಾಧಿಸುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ಸರ್ವೇಶ್ವರನ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಪ್ರತಿವರುಷವೂ ಸೈನ್ಯಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯ ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಎಲ್ಕಾನನು ಪ್ರತಿ ವರ್ಷವೂ ತನ್ನ ಪಟ್ಟಣವಾದ ರಾಮಾತಯಿಮ್ ಬಿಟ್ಟು ಶೀಲೋವಿಗೆ ಹೋಗುತ್ತಿದ್ದನು. ಅವನು ಶೀಲೋವಿನಲ್ಲಿ ಸರ್ವಶಕ್ತನಾದ ಯೆಹೋವನನ್ನು ಆರಾಧಿಸಿ ಆತನಿಗೆ ಯಜ್ಞವನ್ನು ಅರ್ಪಿಸುತ್ತಿದ್ದನು. ಹೊಫ್ನಿ ಮತ್ತು ಫೀನೆಹಾಸರೆಂಬ ಯಾಜಕರು ಯೆಹೋವನ ಸೇವೆಮಾಡುವ ಸ್ಥಳವೇ ಶೀಲೋವ. ಹೊಫ್ನಿ ಮತ್ತು ಫೀನೆಹಾಸರು ಏಲಿಯನ ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ಶೀಲೋವಿನಲ್ಲಿ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸಲೂ, ಅವರಿಗೆ ಬಲಿಯನ್ನು ಅರ್ಪಿಸಲೂ ಪ್ರತಿವರ್ಷ ಪಟ್ಟಣದಿಂದ ಹೋಗುತ್ತಿದ್ದನು. ಯೆಹೋವ ದೇವರ ಯಾಜಕ ಏಲಿಯ ಮಕ್ಕಳಿಬ್ಬರಾದ ಹೊಫ್ನಿಯೂ, ಫೀನೆಹಾಸನೂ ಅಲ್ಲಿ ಇದ್ದರು. ಅಧ್ಯಾಯವನ್ನು ನೋಡಿ |