Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಆಳು ಮುಂದೆ ಹೋದಾಗ ಸಮುವೇಲನು ಎಣ್ಣೇ ಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ - ಯೆಹೋವನು ತನ್ನ ಸ್ವಾಸ್ತ್ಯದ ಮೇಲೆ ಪ್ರಭುವಾಗಿರುವದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:1
38 ತಿಳಿವುಗಳ ಹೋಲಿಕೆ  

ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.


ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು.


ತನ್ನ ಅಭಿಷಿಕ್ತನಿಗೆ ಕೈಯೆತ್ತದಂತೆ ಯೆಹೋವನು ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನು, ನೀರಿನ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ” ಎಂದು ಹೇಳಿ


ಇಸ್ರಾಯೇಲರು ಮಾತ್ರ ಯೆಹೋವನ ಸ್ವಂತ ಜನರಾದರು. ಯಾಕೋಬನ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದರು.


“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”


ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.


ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನೂ ವಂದಿಸಿರಿ.


ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.


ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.


ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.


ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.


ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು


ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.


ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;


ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು.


“ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.”


“ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,


ಸಮುವೇಲನು ಸೌಲನಿಗೆ, “ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು” ಎಂದನು.


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.


ಸಮುವೇಲನು ಸೌಲನಿಗೆ, “ಯೆಹೋವನು ನಿನ್ನನ್ನು ತನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕೋಸ್ಕರ ನನ್ನನ್ನೇ ಕಳುಹಿಸಿದನಲ್ಲಾ; ಆತನು ಈಗ ಹೇಳುವುದನ್ನು ಕೇಳು.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು.


ದಾವೀದನು ಅವನಿಗೆ, “ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?” ಎಂದು ಹೇಳಿ


ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, ‘ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಜಯಘೋಷ ಮಾಡಲಿ.


ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.


ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.


ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.


ಆದರೆ ಅವರು, “ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು” ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, “ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು