Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸೌಲನು, “ಕತ್ತೆಗಳು ಸಿಕ್ಕಿದವೆಂದು ತಿಳಿಸಿದನು,” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ಆ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕತ್ತೆಗಳು ಸಿಕ್ಕಿದವೆಂದು ತಿಳಿಸಿದನು ಎಂಬದಾಗಿ ಹೇಳಿದನೇ ಹೊರತು ಅವನು ಹೇಳಿದ ರಾಜ್ಯದ ಮಾತನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸೌಲನು ಅವನಿಗೆ, “ಕತ್ತೆಗಳು ಈಗಾಗಲೇ ಸಿಕ್ಕಿವೆ ಎಂದು ಸಮುವೇಲನು ಹೇಳಿದನು” ಅಂದನು. ಸೌಲನು ತನ್ನ ಚಿಕ್ಕಪ್ಪನಿಗೆ ಎಲ್ಲವನ್ನೂ ತಿಳಿಸಲಿಲ್ಲ. ರಾಜ್ಯದ ಬಗ್ಗೆ ಸಮುವೇಲನು ಹೇಳಿದ ಮಾತುಗಳನ್ನು ಸೌಲನು ತನ್ನ ಚಿಕ್ಕಪ್ಪನಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸೌಲನು ತನ್ನ ಚಿಕ್ಕಪ್ಪನಿಗೆ, “ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು,” ಎಂದನು. ಆದರೆ ಅವನು ಸಮುಯೇಲನು ಹೇಳಿದ ರಾಜ್ಯಭಾರದ ಮಾತನ್ನು ಅವನಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:16
9 ತಿಳಿವುಗಳ ಹೋಲಿಕೆ  

ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.


ಸಮುವೇಲನು ಸೌಲನಿಗೆ, “ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು” ಎಂದನು.


ಮೂರು ದಿನಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಇಸ್ರಾಯೇಲರ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು, ನಿನ್ನ ಮತ್ತು ನಿನ್ನ ತಂದೆಯ ಕುಟುಂಬದವರಿಗೂ ಸಲ್ಲುವುದು” ಎಂದು ಹೇಳಿದನು.


ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಅಂದನು.


“ಸಮುವೇಲನು ಏನು ಹೇಳಿದನು?” ಎಂದು ಚಿಕ್ಕಪ್ಪನು ಕೇಳಲು


ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ.


ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.


ಹರಿಯುವ ಸಮಯ, ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತನಾಡುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು