Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ ನಮಗೊಬ್ಬ ಅರಸನನ್ನು ನೇವಿುಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದದರಿಂದ ನೀವು ಕುಲಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ ಎಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಇಂದು ನೀವು ನಿಮ್ಮ ದೇವರನ್ನು ತಿರಸ್ಕರಿಸಿರುವಿರಿ. ನಿಮ್ಮ ದೇವರು ನಿಮ್ಮನ್ನು ಕಷ್ಟಗಳಿಂದ ಮತ್ತು ಸಮಸ್ಯೆಗಳಿಂದ ರಕ್ಷಿಸುತ್ತಾನೆ. ಆದರೆ ನೀವು, ‘ಇಲ್ಲ, ನಮ್ಮನ್ನಾಳಲು ನಮಗೊಬ್ಬ ರಾಜನು ಬೇಕು’ ಎಂದು ಕೇಳಿದಿರಿ. ಈಗ ಬನ್ನಿ, ನೀವು, ನಿಮ್ಮ ಕುಲಗಳ ಮತ್ತು ಗೋತ್ರಗಳ ಸಮೇತವಾಗಿ ಯೆಹೋವನ ಸಮ್ಮುಖದಲ್ಲಿ ನಿಲ್ಲಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಅವರಿಗೆ, ‘ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು,’ ಎಂದು ಹೇಳಿದಿರಿ. ಆದ್ದರಿಂದ ಈಗ ಯೆಹೋವ ದೇವರ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ, ನಿಮ್ಮ ಕುಲಗಳ ಪ್ರಕಾರವಾಗಿಯೂ ಬನ್ನಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:19
18 ತಿಳಿವುಗಳ ಹೋಲಿಕೆ  

ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.


ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;


ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


“ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕುಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು.


ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ,


ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು.


ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು.


ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯವರೆಗೂ ನಡೆಯಿತು.


ಆಗ ಸೌಲನು ಪ್ರಜೆಗಳ ಮುಖಂಡರಿಗೆ, “ನೀವೆಲ್ಲರೂ ಇಲ್ಲಿ ಬಂದು, ಈ ಹೊತ್ತು ಪಾಪ ಯಾವುದರಿಂದ ಉಂಟಾಯಿತು ಎಂದು ವಿಚಾರಿಸಿ ಗೊತ್ತುಮಾಡಿರಿ.


ಮಡಲಿನಲ್ಲಿ ಚೀಟು ಹಾಕಬಹುದು, ಅದರ ತೀರ್ಪು ಯೆಹೋವನದೇ.


ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಸಮುವೇಲನು ಇಸ್ರಾಯೇಲರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು.


ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.


ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು