Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ದಿನ ನೀನು ನನ್ನನ್ನು ಬಿಟ್ಟುಹೋದನಂತರ, ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಖೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ವ್ಯಕ್ತಿಗಳನ್ನು ಕಾಣುವೆ; ಅವರು, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆ ಕತ್ತೆಗಳ ಚಿಂತೆಬಿಟ್ಟು ನನ್ನ ಮಗನೆಲ್ಲಿ ಹೋದನೋ ಎಂದು ನಿನಗಾಗಿ ಹಂಬಲಿಸುತ್ತಾ ಇರುತ್ತಾರೆ’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ; ಅವರು ನಿನಗೆ - ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನೆಲ್ಲಿ ಹೋದನೋ ಎಂಬದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ದಿನ ನನ್ನನ್ನು ಬಿಟ್ಟು ನೀನು ಮುಂದೆ ಸಾಗಿದಾಗ, ಬೆನ್ಯಾಮೀನನ ಮೇರೆಯಲ್ಲಿರುವ ಚೆಲ್ಚಹಿನಲ್ಲಿನ ರಾಹೇಲಳ ಸಮಾಧಿಯ ಬಳಿ ಇಬ್ಬರು ಮನುಷ್ಯರನ್ನು ಸಂಧಿಸುವೆ. ಅವರಿಬ್ಬರೂ ನಿನಗೆ, ‘ನೀನು ಹುಡುಕುತ್ತಿದ್ದ ಕತ್ತೆಗಳು ಒಬ್ಬನಿಗೆ ಸಿಕ್ಕಿವೆ. ನಿನ್ನ ತಂದೆಯು ಕತ್ತೆಗಳ ಬಗ್ಗೆ ಚಿಂತಿಸುವುದನ್ನು ಬಿಟ್ಟು ನಿನ್ನ ಬಗ್ಗೆ ಚಿಂತಿಸುತ್ತಿದ್ದಾನೆ. ನನ್ನ ಮಗನು ಎಲ್ಲಿಗೆ ಹೋದನೋ ಎಂದು ಹಂಬಲಿಸುತ್ತಿದ್ದಾನೆ’ ಎಂದು ಹೇಳುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀನು ಈ ಹೊತ್ತು ನನ್ನನ್ನು ಬಿಟ್ಟುಹೋದಾಗ, ಬೆನ್ಯಾಮೀನ್ಯರ ಮೇರೆಯಾದ ಚೆಲ್ಚಹಿನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವೆ. ಅವರು ನಿನಗೆ, ‘ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು, ನಿನಗೋಸ್ಕರ ಚಿಂತೆಪಟ್ಟು, ತನ್ನ ಮಗನಿಗೋಸ್ಕರ ಏನು ಮಾಡಲಿ? ಎನ್ನುತ್ತಾನೆ,’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:2
7 ತಿಳಿವುಗಳ ಹೋಲಿಕೆ  

ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.


ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.


ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.”


ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.


ನಾನು ಪದ್ದನ್ ಅರಾಮಿನಿಂದ ಬರುವಾಗ ಕಾನಾನ್ ದೇಶದಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತುಹೋದಳು. ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು