1 ಸಮುಯೇಲ 10:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರು, “ಆ ವ್ಯಕ್ತಿ ಇಲ್ಲಿಗೆ ಬರುವನೋ?” ಎಂದು ಸರ್ವೇಶ್ವರನನ್ನು ವಿಚಾರಿಸಿದಾಗ, “ಬಂದಿದ್ದಾನೆ; ಇಗೋ, ಸರಕು ಸಾಮಾನುಗಳ ನಡುವೆ ಅಡಗಿಕೊಂಡಿದ್ದಾನೆ,” ಎಂದು ಉತ್ತರ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರು - ಆ ಮನುಷ್ಯನು ಇಲ್ಲಿಗೆ ಬರುವನೋ ಎಂದು ಯೆಹೋವನನ್ನು ವಿಚಾರಿಸಿದಾಗ ಆತನು - ಬಂದಿದ್ದಾನೆ; ಇಗೋ, ಸಾಮಾನುಗಳಲ್ಲಿ ಅಡಗಿಕೊಂಡಿದ್ದಾನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ ಅವರು ಯೆಹೋವನನ್ನು, “ಸೌಲನು ಇಲ್ಲಿಗೆ ಬರುವನೋ?” ಎಂದು ಕೇಳಿದರು. ಯೆಹೋವನು, “ಸೌಲನು ಸರಕುಗಳ ಹಿಂದೆ ಅಡಗಿಕೊಂಡಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದ್ದರಿಂದ ಅವರು, “ಅವನು ಇನ್ನು ಇಲ್ಲಿ ಬರುವನೋ?” ಎಂದು ಯೆಹೋವ ದೇವರನ್ನು ವಿಚಾರಿಸಿದರು. ಯೆಹೋವ ದೇವರು, “ಇಗೋ, ಅವನು ಸಲಕರಣೆಗಳಲ್ಲಿ ಅಡಗಿಕೊಂಡಿದ್ದಾನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |