Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಸರ್ವೇಶ್ವರನ ಸನ್ನಿಧಿಯಲ್ಲಿಟ್ಟನು; ಆಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ ಅದನ್ನು ಒಂದು ಪುಸ್ತಕದಲ್ಲಿ ಬರೆದು ಯೆಹೋವನ ಸನ್ನಿಧಿಯಲ್ಲಿಟ್ಟನು; ಆಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸಮುವೇಲನು ಜನರಿಗೆ ರಾಜನೀತಿಯ ನಿಯಮಗಳನ್ನು ವಿವರಿಸಿದನು. ಅವನು ಒಂದು ಪುಸ್ತಕದಲ್ಲಿ ಆ ನಿಯಮಗಳನ್ನು ಬರೆದನು. ಅವನು ಯೆಹೋವನ ಸನ್ನಿಧಿಯಲ್ಲಿ ಆ ಪುಸ್ತಕವನ್ನಿಟ್ಟನು. ಬಳಿಕ ಸಮುವೇಲನು ಜನರನ್ನು ಮನೆಗಳಿಗೆ ಹಿಂದಿರುಗಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಸಮುಯೇಲನು ರಾಜ್ಯದ ಪದ್ಧತಿಯನ್ನು ಜನರಿಗೆ ಹೇಳಿಕೊಟ್ಟು, ಒಂದು ಪುಸ್ತಕದಲ್ಲಿ ಬರೆದು, ಯೆಹೋವ ದೇವರ ಮುಂದೆ ಇಟ್ಟನು. ಆಗ ಸಮುಯೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:25
13 ತಿಳಿವುಗಳ ಹೋಲಿಕೆ  

ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,


ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.


“ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.


ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು.


ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.


ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು