1 ಸಮುಯೇಲ 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಒಂದು ತಿಂಗಳ ನಂತರ ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಸಂಧಾನ ಮಾಡಿಕೋ; ನಾವು ನಿನಗೆ ಅಧೀನರಾಗಿರುತ್ತೇವೆ,” ಎಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಮ್ಮೋನಿಯನಾದ ನಾಹಾಷನು ಹೊರಟುಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆಹಾಕಲು ಯಾಬೇಷಿನವರು ಅವನನ್ನು - ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನ ಸೇವಕರಾಗಿರುವೆವು ಎಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಮ್ಮೋನಿಯನಾದ ನಾಹಾಷನು ಒಂದು ತಿಂಗಳ ನಂತರ, ತನ್ನ ಸೈನ್ಯದೊಂದಿಗೆ ಯಾಬೇಷ್‌ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನ ಜನರೆಲ್ಲ ನಾಹಾಷನಿಗೆ, “ನೀನು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾದರೆ, ನಾವು ನಿನ್ನ ಸೇವೆಮಾಡುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ಮುತ್ತಿಗೆಹಾಕಿದನು. ಆಗ ಯಾಬೇಷಿನ ಜನರೆಲ್ಲರು ನಾಹಾಷನಿಗೆ, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿದರೆ, ನಾವು ನಿನಗೆ ಅಧೀನರಾಗಿರುವೆವು,” ಎಂದರು. ಅಧ್ಯಾಯವನ್ನು ನೋಡಿ |
ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು” ಎಂದು ಹೇಳಿದನು. ಆಗ ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ” ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು.