Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಿದರು. ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಲು ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೌಲನು ವಾಸವಾಗಿದ್ದ ಗಿಬೆಯಕ್ಕೆ ಸಂದೇಶಕರು ಬಂದು ಜನರಿಗೆ ಸುದ್ದಿಯನ್ನು ತಿಳಿಸಿದರು. ಜನರು ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರಿಗೆ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಸ್ವರವನ್ನೆತ್ತಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:4
15 ತಿಳಿವುಗಳ ಹೋಲಿಕೆ  

ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.


ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.


ಅವರು ತಮ್ಮಿಂದಾಗುವಷ್ಟು ಕಾಲ ಅತ್ತರು.


ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು.


ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು, ಗಟ್ಟಿಯಾಗಿ ಅಳುತ್ತಾ,


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.


ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬೆ ವೃಕ್ಷದ ಅಡಿಯಲ್ಲಿ ತಂಗಿದ್ದನು. ಅವನ ಜೊತೆಯಲ್ಲಿ ಸುಮಾರು ಆರು ನೂರು ಮಂದಿ ಸೈನಿಕರೂ,


ಏಸಾವನು ಅವನಿಗೆ, “ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು” ಎಂದು ಹೇಳಿ ಗೋಳಾಡುತ್ತಾ ಅಳಲು,


ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು.


ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.


ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು. ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು. ಅನತೋತ್ ಊರಿನವರಾದ ಯೇಹು ಬೇರಾಕಾರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು