1 ಸಮುಯೇಲ 11:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಜನರು ಗೋಳಾಡುವುದಕ್ಕೇನು ಕಾರಣವೆಂದು ಕೇಳಲು ಯಾಬೇಷಿನವರ ವರ್ತಮಾನವನ್ನು ಅವನಿಗೆ ತಿಳಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು - ಜನರು ಗೋಳಾಡುವದಕ್ಕೇನು ಕಾರಣವೆಂದು ಕೇಳಲು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸೌಲನು ಹಸುಗಳನ್ನು ಹೊಡೆದುಕೊಂಡು ಹೊಲಕ್ಕೆ ಹೋಗಿದ್ದನು. ಸೌಲನು ಹೊಲದಿಂದ ಬಂದಾಗ ಜನರೆಲ್ಲ ಅಳುವುದು ಕೇಳಿಸಿತು. ಸೌಲನು, “ಏನಾಯಿತು? ಜನರು ಅಳುತ್ತಿರುವುದೇಕೆ?” ಎಂದು ಕೇಳಿದನು. ಆಗ ಜನರೆಲ್ಲ ಯಾಬೇಷಿನ ಸಂದೇಶಕರು ಹೇಳಿದ್ದನ್ನೆಲ್ಲ ಸೌಲನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು, “ಜನರು ಅಳುವುದೇಕೆ?” ಎಂದು ಕೇಳಿದನು. ಅವರು ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು. ಅಧ್ಯಾಯವನ್ನು ನೋಡಿ |