1 ಸಮುಯೇಲ 12:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಅವರು, “ನಾವು ಸರ್ವೇಶ್ವರನಾದ ನಿಮ್ಮನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸಿರಿ; ನಾವು ಇನ್ನು ಮುಂದೆ ನಿಮ್ಮನ್ನೇ ಪೂಜಿಸಿ, ಸೇವೆಮಾಡುತ್ತೇವೆ,” ಎಂದು ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಅವರು ಆತನಿಗೆ - ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು ಎಂದು ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ನಿಮ್ಮ ಪೂರ್ವಿಕರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟು, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಸುಳ್ಳುದೇವರಾದ ಬಾಳನ ಮತ್ತು ಸುಳ್ಳುದೇವತೆಯಾದ ಅಷ್ಟೋರೆತಳ ಸೇವೆ ಮಾಡಿ ಪಾಪಮಾಡಿದ್ದೇವೆ. ಆದರೆ ಈಗ ನಮ್ಮನ್ನು ಶತ್ರುಗಳಿಂದ ರಕ್ಷಿಸು; ಆಗ ನಾವು ನಿನ್ನ ಸೇವೆಮಾಡುತ್ತೇವೆ’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇವರು ಅವರ ಸಂಗಡ ಯುದ್ಧಮಾಡಿದರು. ಆದ್ದರಿಂದ ಅವರು ಯೆಹೋವ ದೇವರಿಗೆ ಮೊರೆಯಿಟ್ಟು, ‘ನಾವು ಯೆಹೋವ ದೇವರಾದ ನಿಮ್ಮನ್ನು ಬಿಟ್ಟು ಬಾಳನನ್ನೂ, ಅಷ್ಟೋರೆತನನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀವು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸಿರಿ; ನಾವು ನಿಮ್ಮ ಸೇವೆ ಮಾಡುವೆವು,’ ಎಂದರು. ಅಧ್ಯಾಯವನ್ನು ನೋಡಿ |