Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಆತನಿಗೆ ವಿಧೇಯರಾಗಿ, ಆತನನ್ನು ಸೇವಿಸುತ್ತಾ, ತಪ್ಪದೆ ಆತನ ಮಾತನ್ನು ಪಾಲಿಸುವವರಾಗಿ, ಆತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೆ ವಿಧೇಯರಾಗಿ ಅವರನ್ನೇ ಪೂಜಿಸಿರಿ; ಅವರ ಮಾತನ್ನು ತಪ್ಪದೆ ಪಾಲಿಸುತ್ತಾ ಅವರನ್ನೇ ಹೊಂದಿಕೊಂಡಿರಿ. ಹೀಗೆ ಮಾಡಿದರೆ ಎಷ್ಟೋ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ವಿಧೇಯರಾಗಿ ಆತನನ್ನು ಸೇವಿಸುತ್ತಾ ತಪ್ಪದೆ ಆತನ ಮಾತು ಕೇಳುವವರಾಗಿ ಆತನನ್ನೇ ಹೊಂದಿಕೊಂಡಿರುವದಾದರೆ ಎಷ್ಟೋ ಒಳ್ಳೇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ನಿರಂತರವಾಗಿ ರಕ್ಷಿಸುತ್ತಾನೆ. ಆದರೆ ನೀವು ಈ ಕಾರ್ಯಗಳನ್ನು ಮಾಡಿದರೆ ಮಾತ್ರ ದೇವರು ನಿಮ್ಮನ್ನು ರಕ್ಷಿಸುತ್ತಾನೆ: ನೀವು ಯೆಹೋವನನ್ನು ಗೌರವಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನ ಆಜ್ಞೆಗಳನ್ನು ವಿರೋಧಿಸಬಾರದು. ನಿಮ್ಮ ದೇವರಾದ ಯೆಹೋವನ ಮಾರ್ಗವನ್ನು ನೀವು ಮತ್ತು ನಿಮ್ಮನ್ನು ಆಳುವ ರಾಜನು ಅನುಸರಿಸಬೇಕು. ನೀವು ಈ ಕಾರ್ಯಗಳನ್ನು ಮಾಡಿದಾಗ ದೇವರು ನಿಮ್ಮನ್ನು ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಯೆಹೋವ ದೇವರ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಯೆಹೋವ ದೇವರಿಗೆ ಭಯಪಟ್ಟು ಅವರನ್ನು ಸೇವಿಸಿ, ಅವರ ಮಾತಿಗೆ ವಿಧೇಯರಾದರೆ ನೀವೂ, ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಯೆಹೋವ ದೇವರನ್ನು ತಪ್ಪದೆ ಹಿಂಬಾಲಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:14
11 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.


ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.


ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು