1 ಸಮುಯೇಲ 12:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಗ ಸಮುವೇಲನು, “ಭಯಪಡಬೇಡಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆ ಆದರೂ ಅದನ್ನು ಬಿಟ್ಟು, ಸರ್ವೇಶ್ವರನನ್ನು ಹೊಂದಿಕೊಂಡು ಪೂರ್ಣಮನಸ್ಸಿನಿಂದ ಅವರೊಬ್ಬರನ್ನೇ ಪೂಜಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು ಯೆಹೋವನನ್ನು ಅಂಟಿಕೊಂಡು ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಸಮುವೇಲನು, “ಭಯಪಡಬೇಡಿ. ಅದೇನೋ ನಿಜ. ನೀವು ಆ ಕೆಟ್ಟಕಾರ್ಯಗಳನ್ನೆಲ್ಲಾ ಮಾಡಿದಿರಿ. ಆದರೆ ಯೆಹೋವನ ಮಾರ್ಗದಲ್ಲಿ ನಡೆಯುವುದನ್ನು ನಿಲ್ಲಿಸದಿರಿ. ಯೆಹೋವನ ಸೇವೆಯನ್ನು ಪೂರ್ಣಹೃದಯದಿಂದ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಸಮುಯೇಲನು ಜನರಿಗೆ, “ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ. ಆದರೂ ಯೆಹೋವ ದೇವರನ್ನು ಬಿಟ್ಟು ತಿರುಗದೆ, ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರನ್ನು ಸೇವಿಸಿರಿ. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.