Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿವಿುತ್ತವಾಗಿ ನಿಮ್ಮನ್ನು ಕೈಬಿಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆದರೆ ಯೆಹೋವನು ತನ್ನ ಜನರನ್ನು ಕೈಬಿಡುವುದಿಲ್ಲ. ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನರನ್ನಾಗಿ ಮಾಡಿಕೊಳ್ಳಲು ಇಷ್ಟಪಟ್ಟನು. ಆದ್ದರಿಂದ ಆತನು ತನ್ನ ಮಹಾ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ತ್ಯಜಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಯೆಹೋವ ದೇವರು ತಮ್ಮ ಮಹತ್ತಾದ ಹೆಸರಿಗೋಸ್ಕರ ತಮ್ಮ ಜನರನ್ನು ಕೈಬಿಡುವುದಿಲ್ಲ. ನಿಮ್ಮನ್ನು ತಮ್ಮ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾರಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:22
49 ತಿಳಿವುಗಳ ಹೋಲಿಕೆ  

ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.


ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.


ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.


ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು” ಎಂದು ಹೇಳಿದನು.


ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.


ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.


ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.


ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.


‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.


ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.


ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?


ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.


ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ಪ್ರೀತಿಸಿದ್ದೇನೆ.” ನೀವೋ “ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?” ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ?


ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವುದೇಕೆ? ಏಕೆ ನಮ್ಮನ್ನು ಇಷ್ಟುಕಾಲ ಕೈಬಿಟ್ಟಿದ್ದೀ?


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.


ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು? ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.


ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.


ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.


ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಎಲ್ಲಾ ಶತ್ರುಗಳು ಬಂದು ಅವರ ಸ್ವತ್ತನ್ನು ಸುಲಿದು ಸೂರೆಮಾಡುವರು.


ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.


ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.


ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.


ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.


ನಮ್ಮ ದೇವರಾದ ಯೆಹೋವನು ನಮ್ಮ ಪೂರ್ವಿಕರ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ, ಆತನು ನಮ್ಮನ್ನು ಕೈಬಿಡದಿರಲಿ, ನಿರಾಕರಿಸದಿರಲಿ.


ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.


ಯೆಹೋವನು ಇದನ್ನು ನೋಡಿ ಇಸ್ರಾಯೇಲರನ್ನು ಭೂಲೋಕದಿಂದ ನಿರ್ನಾಮ ಮಾಡುವುದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ಅವರನ್ನು ರಕ್ಷಿಸಿದನು.


ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.


“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.


ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು