1 ಸಮುಯೇಲ 12:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ ಪೀಡಿಸಿದ್ದೂ ಲಂಚತೆಗೆದುಕೊಂಡು ಕುರುಡನಂತೆ ತೀರ್ಪುಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ ಅನ್ನಲು ಅವರು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |