Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್‌ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹಿಬ್ರಿಯರು ಈಟಿಕತ್ತಿಗಳನ್ನು ಮಾಡಿಸಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆ ಇದ್ದುದರಿಂದ ಇಸ್ರಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕಬ್ಬಿಣದಿಂದ ಆಯುಧಗಳನ್ನು ತಯಾರಿಸಲು ಇಸ್ರೇಲರಿಗೆ ಗೊತ್ತಿರಲಿಲ್ಲ. ಇಸ್ರೇಲಿನಲ್ಲಿ ಯಾವ ಕಮ್ಮಾರರೂ ಇರಲಿಲ್ಲ. ಇಸ್ರೇಲರು ಕಬ್ಬಿಣದಿಂದ ಕತ್ತಿಗಳನ್ನು ಮತ್ತು ಈಟಿಗಳನ್ನು ತಯಾರಿಸಬಹುದೆಂಬ ಭೀತಿಯು ಫಿಲಿಷ್ಟಿಯರಿಗೆ ಇದ್ದಕಾರಣ ಅವರು ಇಸ್ರೇಲರಿಗೆ ಕಬ್ಬಿಣದಿಂದ ತಯಾರಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ನೀಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಹಿಬ್ರಿಯರು ತಮಗೆ ಖಡ್ಗವನ್ನಾದರೂ ಈಟಿಯನ್ನಾದರೂ ಮಾಡಿಕೊಳ್ಳಬಾರದು,” ಎಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ, ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:19
6 ತಿಳಿವುಗಳ ಹೋಲಿಕೆ  

ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.


ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.


ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ, ಹಾಳುಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ.


ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹರಿತ ಮಾಡಿಸುವುದಕ್ಕೆ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು.


ಇದು ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇಮಿನ ಸರದಾರರು, ಶಿಲ್ಪಿಗಳು, ಕಮ್ಮಾರರು ಇವರು ಯೆರೂಸಲೇಮಿನಿಂದ ತೊಲಗಿದ ಮೇಲೆ ನಡೆದ ಸಂಗತಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು