1 ಸಮುಯೇಲ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ಅವರಲ್ಲಿ ಮೂರು ಸಾವಿರ ಜನರನ್ನು ಮಿಕ್ಮಾಷಿನಲ್ಲೂ ಬೇತೇಲಿನ ಗುಡ್ಡದಲ್ಲೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗೆಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಬೇರೆ ಇಸ್ರಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಅವರಲ್ಲಿ ಎರಡು ಸಾವಿರ ಜನರನ್ನು ವಿುಕ್ಮಾಷಿನಲ್ಲಿಯೂ ಬೇತೇಲಿನ ಗುಡ್ಡದಲ್ಲಿಯೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ಮೂರು ಸಾವಿರ ಇಸ್ರೇಲ್ ಗಂಡಸರನ್ನು ಆರಿಸಿಕೊಂಡನು. ಅವರಲ್ಲಿ ಎರಡು ಸಾವಿರ ಗಂಡಸರು ಗುಡ್ಡಗಾಡು ಪ್ರದೇಶವಾದ ಬೇತೇಲಿನಲ್ಲಿಯೂ ಮಿಕ್ಮಾಷಿನಲ್ಲಿಯೂ ಅವನೊಂದಿಗೆ ಇದ್ದರು. ಉಳಿದ ಒಂದು ಸಾವಿರ ಗಂಡಸರು ಬೆನ್ಯಾಮೀನನ ಗಿಬೆಯದಲ್ಲಿ ಯೋನಾತಾನನೊಂದಿಗೆ ಇದ್ದರು. ಸೌಲನು ಸೈನ್ಯದಲ್ಲಿದ್ದ ಇತರರನ್ನು ಅವರವರ ಮನೆಗಳಿಗೆ ಮರಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸೌಲನು ಇಸ್ರಾಯೇಲರೊಳಗಿಂದ ಮೂರು ಸಾವಿರ ಜನ ಪುರುಷರನ್ನು ಆಯ್ದುಕೊಂಡನು. ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯು, ಬೇತೇಲಿನ ದಿನ್ನೆ ಪ್ರದೇಶಗಳಲ್ಲಿಯು ಇದ್ದರು. ಒಂದು ಸಾವಿರ ಜನರು ಬೆನ್ಯಾಮೀನ್ಯರ ಗಿಬೆಯದಲ್ಲಿ ಯೋನಾತಾನನ ಜೊತೆಗಿದ್ದರು. ಉಳಿದ ಜನರನ್ನು ಅವನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿ |