1 ಸಮುಯೇಲ 13:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದನು. ಈ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಹಿಬ್ರಿಯರೆಲ್ಲರಿಗೂ ಇದು ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬೇರೆ ಇಸ್ರಾಯೇಲ್ಯರನ್ನು ಅವರವರ ಮನೆಗಳಿಗೆ ಕಳುಹಿಸಿದನು. ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಠಾಣವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಈ ಸಂಗತಿಯು ಎಲ್ಲಾ ಇಬ್ರಿಯರಿಗೂ ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೋನಾತಾನನು ಫಿಲಿಷ್ಟಿಯರನ್ನು ಅವರ ಶಿಬಿರವಿದ್ದ ಗೆಬದಲ್ಲಿ ಸೋಲಿಸಿದನು. ಫಿಲಿಷ್ಟಿಯರು ಈ ವಿಚಾರವನ್ನು ಕೇಳಿ, “ಇಬ್ರಿಯರು ದಂಗೆ ಎದ್ದಿದ್ದಾರೆ” ಎಂದು ಹೇಳಿದರು. ಸೌಲನು, “ಏನು ನಡೆಯಿತೆಂಬುದು ಇಬ್ರಿಯರಿಗೆ ತಿಳಿಯಲಿ” ಎಂದು ಹೇಳಿದನು. ಆದ್ದರಿಂದ ಸೌಲನು ಇಸ್ರೇಲ್ ದೇಶದಲ್ಲೆಲ್ಲಾ ಕೊಂಬೂದಿಸಬೇಕೆಂದು ಜನರಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ತಿಳಿದುಬಂತು. ಆದ್ದರಿಂದ ಸೌಲನು ದೇಶದಲ್ಲೆಲ್ಲಾ ಹಿಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು. ಅಧ್ಯಾಯವನ್ನು ನೋಡಿ |