Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ’ ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆ ಎಂಬುದಕ್ಕೆ ಇದೇ ಗುರುತು ಎಂದು ತಿಳಿದು ಮೇಲೆ ಹೋಗೋಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿ’ ಎಂದು ಕರೆದರೆ ಸರ್ವೇಶ್ವರ ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾರೆಂಬುದಕ್ಕೆ ಇದೇ ಗುರುತೆಂದು ತಿಳಿದು ಮೇಲೆ ಹೋಗೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದರೆ ಅವರು - ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆಂಬದಕ್ಕೆ ಇದೇ ಗುರುತೆಂದು ತಿಳಿದು ಮೇಲೆ ಹೋಗೋಣ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಫಿಲಿಷ್ಟಿಯರು, ‘ನಮ್ಮ ಬಳಿಗೆ ಹತ್ತಿ ಬನ್ನಿ’ ಎಂದರೆ, ನಾವು ಅವರ ಬಳಿಗೆ ಹತ್ತಿ ಹೋಗೋಣ; ಯಾಕೆಂದರೆ ಅದು ದೇವರ ಗುರುತು. ದೇವರು ಅವರನ್ನು ಸೋಲಿಸಲು ನಮಗೆ ಅವಕಾಶ ಕಲ್ಪಿಸಿದ್ದಾನೆ ಎಂಬುದೇ ಅದರ ಅರ್ಥ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ,’ ಎಂದು ಹೇಳಿದರೆ ನಾವು ಮೇಲೆ ಹತ್ತಿ ಹೋಗೋಣ. ಏಕೆಂದರೆ ಯೆಹೋವ ದೇವರು ಅವರನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟರೆಂಬುದಕ್ಕೆ ಇದೇ ನಮಗೆ ಗುರುತಾಗಿರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:10
8 ತಿಳಿವುಗಳ ಹೋಲಿಕೆ  

ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು.


ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.


ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯಬರುವುದು” ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.


ಮತ್ತು ಗಿದ್ಯೋನನು ದೇವರಿಗೆ, “ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬುದನ್ನು ತಿಳಿಯಪಡಿಸು.


‘ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿರಿ’ ಎಂದು ಅವರು ನಮಗೆ ಹೇಳಿದರೆ ಮೇಲೆ ಹತ್ತದೆ ಇದ್ದ ಸ್ಥಳದಲ್ಲೇ ಇರೋಣ.


ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.


ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು