Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ, ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೋನಾತಾನನಿಗೆ ತನ್ನತಂದೆ ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ ಕೈಯಿಂದ ತೆಗೆದು ತಿಂದನು. ಕೂಡಲೆ ಅವನ ಕಣ್ಣುಗಳು ಕಳೆಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದದರಿಂದ ಅವನು ತನ್ನ ಕೋಲನ್ನು ಜೇನು ತೊಟ್ಟಿಯಲ್ಲಿ ಚುಚ್ಚಿ ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಯೋನಾತಾನನಿಗೆ ಈ ಶಾಪದ ಕುರಿತು ತಿಳಿದಿರಲಿಲ್ಲ; ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದೂ ಗೊತ್ತಿರಲಿಲ್ಲ. ಯೋನಾತಾನನ ಕೈಯಲ್ಲಿ ಒಂದು ಕೋಲಿತ್ತು. ಅವನು ಆ ಕೋಲನ್ನು ಜೇನುಗೂಡಿನಲ್ಲಿ ಚುಚ್ಚಿ ಸ್ವಲ್ಪ ಜೇನನ್ನು ತೆಗೆದುಕೊಂಡು ತಿಂದನು. ಆಗ ಅವನು ಸ್ವಲ್ಪ ಬಲಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಯೋನಾತಾನನು ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಕೇಳದೆ ಇದ್ದ ಕಾರಣ, ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ, ಅದನ್ನು ಜೇನು ತೊಟ್ಟಿಯಲ್ಲಿ ಅದ್ದಿ, ತನ್ನ ಬಾಯಿಗೆ ಹಾಕಿಕೊಂಡನು. ಅದರಿಂದ ಅವನ ಕಣ್ಣುಗಳು ಕಳೆಯನ್ನು ಹೊಂದಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:27
6 ತಿಳಿವುಗಳ ಹೋಲಿಕೆ  

ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿ ಗೊಂಚಲುಗಳನ್ನು ಕೊಟ್ಟರು. ಮೂರು ದಿನ ಹಗಲಿರುಳು ಅನ್ನಪಾನವಿಲ್ಲದೆ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.


ಆಗ ಸೌಲನು ಯೋನಾತಾನನನ್ನು, “ನೀನು ಏನು ಮಾಡಿದಿ, ಹೇಳು” ಎಂದು ಕೇಳಲು ಅವನು, “ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ನಾನು ಸಾಯುವುದಕ್ಕೆ ಸಿದ್ಧನಾಗಿದ್ದೇನೆ” ಎಂದು ಉತ್ತರಕೊಟ್ಟನು.


ಜನರು ಬಹಳವಾಗಿ ಬಳಲಿ ಹೋದದ್ದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ, “ನನ್ನ ತಂದೆಯು ದೇಶದಲ್ಲಿ ಇಕ್ಕಟ್ಟನ್ನು ಉಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದ್ದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.


ದುಷ್ಟರಿಂದ ಸೋತ ಶಿಷ್ಟನು, ಹಾಳು ಬಾವಿ ಮತ್ತು ತುಳಿದಾಡಿದ ಒರತೆ.


ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು.


ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು