Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಆ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿಮಗನೂ, ಫೀನೆಹಾಸನ ಮೊಮ್ಮಗನೂ, ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ‘ಏಫೋದ’ನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದನು. ಈ ಅಹೀಯನು ಶಿಲೋವಿನಲ್ಲಿ ಸರ್ವೇಶ್ವರನ ಯಾಜಕನಾಗಿದ್ದ ಏಲಿಯ ಮರಿಮಗನೂ ಫೀನೆಹಾಸನ ಮೊಮ್ಮಗನೂ ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಈ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿ ಮಗನೂ ಫೀನೆಹಾಸನ ಮೊಮ್ಮಗನೂ ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರಲ್ಲಿ ಅಹೀಯನೂ ಒಬ್ಬನು. ಶೀಲೋವಿನಲ್ಲಿ ಏಲಿಯು ಯೆಹೋವನ ಯಾಜಕನಾಗಿದ್ದನು. ಏಫೋದನ್ನು ಧರಿಸಿದ್ದ ಅಹೀಯನು ಆಗ ಅಲ್ಲಿ ಯಾಜಕನಾಗಿದ್ದನು. ಅಹೀಯನು ಈಕಾಬೋದನ ಸೋದರನಾದ ಅಹೀಟೂಬನ ಮಗ. ಈಕಾಬೋದನು ಫೀನೆಹಾಸನ ಮಗ. ಫೀನೆಹಾಸನು ಏಲಿಯ ಮಗ. ಯೋನಾತಾನನು ಹೊರಟುಹೋದನೆಂಬುದು ಜನರಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಏಲಿಯ ಮಗ ಫೀನೆಹಾಸನ ಮಗ ಈಕಾಬೋದನ ಸಹೋದರ ಅಹೀಟೂಬನ ಮಗ ಅಹೀಯನು ಶೀಲೋವಿನಲ್ಲಿ ಏಫೋದನ್ನು ಧರಿಸಿಕೊಂಡು ಯೆಹೋವ ದೇವರ ಯಾಜಕನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:3
9 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು,


ದೇವರ ಮಂಜೂಷವು ಶತ್ರುವಶವಾದ್ದರಿಂದಲೂ, ಮಾವನೂ, ಗಂಡನೂ ಮೃತರಾದ್ದರಿಂದಲೂ, “ಮಹಿಮೆಯು ಇಸ್ರಾಯೇಲರನ್ನು ಬಿಟ್ಟು ಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದ್” ಎಂದು ಹೆಸರಿಟ್ಟಳು.


ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.


ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.


ಸೌಲನು ತನ್ನ ಸೈನಿಕರನ್ನು, “ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ, ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು, ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ” ಎಂದು ಕರೆದನು. ಅವರು, “ನಿನ್ನ ಇಷ್ಟದಂತೆ ಆಗಲಿ” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ” ಎಂದನು.


ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.


ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು