Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಅದಕ್ಕೆ ಸೌಲನು - ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಅನ್ನಲು ಜನರು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಸೌಲನು, “ನಾನು ನನ್ನ ಆಣೆಯನ್ನು ನೆರವೇರಿಸದಿದ್ದರೆ ಯೆಹೋವನು ಬಹುಶಃ ನನಗೆ ಬಹಳ ಕೆಟ್ಟದ್ದನ್ನು ಮಾಡಬಹುದು. ಯೋನಾತಾನನು ಸಾಯಲೇಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಅದಕ್ಕೆ ಸೌಲನು, “ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:44
11 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು” ಎಂದು ಹೇಳಿದನು; ಜನರು ಏನೂ ಮಾತನಾಡದೆ ಮೌನವಾಗಿದ್ದರು.


ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.


ಜೇನು ಸಿಕ್ಕಿತೋ? ಮಿತವಾಗಿ ತಿನ್ನು, ಹೊಟ್ಟೆತುಂಬಾ ತಿಂದರೆ ಕಾರಿಬಿಟ್ಟೀಯೇ.


ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.


ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.


ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.


ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,


ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.


ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು


ಆಗ ಏಲಿಯು ಅವನಿಗೆ, “ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿಡಬೇಡ; ಮುಚ್ಚಿಟ್ಟರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ” ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು