Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದರಲ್ಲಿ ಒಂದು ಬಂಡೆ ಉತ್ತರದಿಕ್ಕಿಗೆ ಎತ್ತರವಾಗಿ ಮಿಕ್ಮಾಷಿಗೂ, ಮತ್ತೊಂದು ದಕ್ಷಿಣದಿಕ್ಕಿನ ಗೆಬಕ್ಕೆ ಎದುರಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಒಂದು ಮಿಕ್ಮಾಷಿಗೆ ಮುಖಮಾಡಿ ಉತ್ತರಕ್ಕಿತ್ತು. ಇನ್ನೊಂದು ಗೆಬಕ್ಕೆ ಮುಖಮಾಡಿ ದಕ್ಷಿಣಕ್ಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಉತ್ತರದಿಕ್ಕಿನದು ಎತ್ತರವಾಗಿ ವಿುಕ್ಮಾಷಿಗೂ ದಕ್ಷಿಣದಿಕ್ಕಿನದು ಗೆಬಕ್ಕೂ ಎದುರಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಒಂದು ಬಂಡೆಗಲ್ಲು ಉತ್ತರದಿಕ್ಕಿನ ಮಿಕ್ಮಾಷಿನ ಕಡೆಗೂ ಇನ್ನೊಂದು ಬಂಡೆಗಲ್ಲು ದಕ್ಷಿಣದಿಕ್ಕಿನ ಗೆಬದ ಕಡೆಗೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ, ಮತ್ತೊಂದು ದಕ್ಷಿಣಕ್ಕೆ ಗಿಬೆಯಕ್ಕೆ ಎದುರಾಗಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:5
10 ತಿಳಿವುಗಳ ಹೋಲಿಕೆ  

ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.


ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.


ಅವನು ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೊರಟಾಗ, ಕಣಿವೆಯ ಮಾರ್ಗದ ಎರಡು ಕಡೆಗಳಲ್ಲಿ ಬೋಚೇಚ್, ಸೆನೆ ಎಂಬ ಎರಡು ಕಡಿದಾದ ಬಂಡೆಗಳು ಇದ್ದವು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.


ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನ ವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು.


ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.


ಸಮುವೇಲನು ಅವನನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಅವನು, “ಜನರು ಚದರಿಹೋಗುವುದನ್ನೂ, ನೀನು ನಿಯಮಿತಕಾಲದಲ್ಲಿ ಬಾರದಿರುವುದನ್ನೂ, ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನೂ ನೋಡಿದೆನು.


ಇದಲ್ಲದೆ ಇಬ್ಹಾರ್, ಎಲೀಷಾಮ್, ಎಲೀಫೆಲೆಟ್,


ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.


ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ. ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು