Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅಹೀಮಾಚನ ಮಗಳಾದ ಅಹೀನೋವಮಳು ಸೌಲನ ಹೆಂಡತಿ. ನೇರನ ಮಗನಾದ ಅಬ್ನೇರನು ಅವನ ಸೇನಾಪತಿ. ನೇರನು ಸೌಲನು ಚಿಕ್ಕಪ್ಪನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಅಹೀಮಾಚನ ಮಗಳಾದ ಅಹೀನೋವಮಳು ಅವನ ಹೆಂಡತಿ; ನೇರನ ಮಗನಾದ ಅಬ್ನೇರನು ಅವನ ಸೇನಾಪತಿ; ನೇರನು ಸೌಲನ ಚಿಕ್ಕಪ್ಪನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅಹೀಮಾಚನ ಮಗಳಾದ ಅಹೀನೋವಮಳು ಅವನ ಹೆಂಡತಿ; ನೇರನ ಮಗನಾದ ಅಬ್ನೇರನು ಅವನ ಸೇನಾಪತಿಯು; ನೇರನು ಸೌಲನ ಚಿಕ್ಕಪ್ಪನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಸೌಲನ ಹೆಂಡತಿಯ ಹೆಸರು ಅಹೀನೋವಮ್. ಅಹೀನೋವಮಳ ತಂದೆ ಅಹೀಮಾಚ. ನೇರನ ಮಗನಾದ ಅಬ್ನೇರನು ಸೌಲನ ಸೈನ್ಯದ ಸೇನಾಪತಿ. ನೇರನು ಸೌಲನ ಚಿಕ್ಕಪ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಅಹೀಮಾಚನ ಪುತ್ರಿಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪ ನೇರನ ಮಗ ಅಬ್ನೇರನೆಂಬವನು ಅವನ ಸೈನ್ಯಾಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:50
9 ತಿಳಿವುಗಳ ಹೋಲಿಕೆ  

ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ದಾವೀದನು ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕೆ ಹೊರಟದ್ದನ್ನು ಸೌಲನು ಕಂಡು ತನ್ನ ಸೇನಾಪತಿಯಾದ ಅಬ್ನೇರನನ್ನು, “ಅಬ್ನೇರನೇ ಈ ಹುಡುಗನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು ಸೌಲನಿಗೆ, “ಅರಸನೇ ನಿನ್ನ ಜೀವದಾಣೆ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.


ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಲು ಅವನು, “ಕತ್ತೆಗಳನ್ನು ಹುಡುಕುವುದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲವಾದ್ದರಿಂದ ಸಮುವೇಲನ ಬಳಿಗೆ ಹೋದೆವು” ಅಂದನು.


ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರ ಹೋಗಿ, ಸೌಲನೂ, ನೇರನ ಮಗನಾದ ಅವನ ಸೇನಾಪತಿ ಅಬ್ನೇರನೂ ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ರಥಗಳನ್ನು ಬಿಟ್ಟಿರುವ ಸ್ಥಳಮಧ್ಯದಲ್ಲಿ ಮಲಗಿದ್ದನು. ಅವನ ಸುತ್ತಲೂ ಸೈನಿಕರು ಇದ್ದರು.


ಇದಲ್ಲದೆ ದೇವ ದರ್ಶಿಯಾದ ಸಮುವೇಲನೂ, ಕೀಷನ ಮಗನಾದ ಸೌಲನೂ, ನೇರನ ಮಗನಾದ ಅಬ್ನೇರನೂ, ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು.


ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧ ನಡೆಯುತ್ತಿರುವಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು.


ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಾಯೇಲರಲ್ಲಿ ಹತವಾದವನು, ಪ್ರಭುವೂ, ಮಹಾಪುರುಷನೂ ಆಗಿದ್ದಾನೆಂಬುದು ನಿಮಗೆ ಗೊತ್ತಿದೆಯಲ್ಲಾ.


ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಕುಲದವರಲ್ಲಿ ಜೆಕರ್ಯಯನ ಮಗನಾದ ಇದ್ದೋ; ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗನಾದ ಯಗಸೀಯೇಲ್;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು