Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಘೋರ ಯುದ್ಧವಾಗುತ್ತಿದ್ದುದ್ದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡರೆ, ಕೂಡಲೆ ಅವನನ್ನು ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಯೇಲರಿಗೂ ಘೋರ ಯುದ್ಧ ಇದ್ದುದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡಕೂಡಲೆ, ಅವನನ್ನು ತನ್ನ ಸೈನ್ಯಕ್ಕೆ ಸೇರಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲ್ಯರಿಗೂ ಘೋರ ಯುದ್ಧವಿದ್ದದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡರೆ ಕೂಡಲೆ ಅವನನ್ನು ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಸೌಲನು ತನ್ನ ಜೀವಮಾನವೆಲ್ಲ ಶೌರ್ಯದಿಂದ ಫಿಲಿಷ್ಟಿಯರ ವಿರುದ್ಧ ತೀವ್ರವಾಗಿ ಹೋರಾಡಿದನು. ಸೌಲನು ವೀರನನ್ನಾಗಲಿ ಧೈರ್ಯಶಾಲಿಯನ್ನಾಗಲಿ ಯಾವಾಗಲಾದರೂ ನೋಡಿದರೆ, ಅಂತಹವರನ್ನು ಸೈನ್ಯಕ್ಕೆ ತೆಗೆದುಕೊಂಡು, ಅವರನ್ನು ರಾಜನ ಅಂಗರಕ್ಷಕ ಪಡೆಗೆ ಸೇರಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಘೋರ ಯುದ್ಧ ನಡೆಯುತ್ತಿತ್ತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ, ಧೈರ್ಯಶಾಲಿಯನ್ನಾದರೂ ಕಂಡರೆ, ಅಂಥವನನ್ನು ತನ್ನ ಸೈನ್ಯಕ್ಕೆ ಸೇರಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:52
4 ತಿಳಿವುಗಳ ಹೋಲಿಕೆ  

“ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.


ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.


ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು