1 ಸಮುಯೇಲ 15:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸೇನಾಧೀಶ್ವರನಾದ ಯೆಹೋವನು ನಿನಗೆ, ‘ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದರು. ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸೇನಾಧೀಶ್ವರನಾದ ಯೆಹೋವನು ನಿನಗೆ - ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಅಮಾಲೇಕ್ಯರು ಅವರನ್ನು ಕಾನಾನಿಗೆ ಹೋಗದಂತೆ ತಡೆಯಲು ಪ್ರಯತ್ನಿಸಿದರು. ಅಮಾಲೇಕ್ಯರು ಮಾಡಿದ್ದನ್ನು ನಾನು ನೋಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿ ತೊಂದರೆಪಡಿಸಿದರು, ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿ |