Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:23
36 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.


ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.


“‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,


ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.


ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಮಾಟಗಾರ್ತಿಯನ್ನು ಜೀವದಿಂದ ಉಳಿಸಬಾರದು.


ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ.


ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ಅವನು ಅಪರಾಧವನ್ನಲ್ಲದೆ ದೈವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು, ದೇವರಿಗೆ ವಿರುದ್ಧವಾಗಿ ಅಧಿಕ ಮಾತುಗಳನ್ನು ಆಡುತ್ತಾನೆ” ಎಂದು ನನಗೆ ಹೇಳುವರು.


ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.


“‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.


“ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನಿಗೆ ದ್ರೋಹಿಗಳಾಗಿ ನಡೆದುಕೊಂಡಿದ್ದೀರಿ.


ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.


ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.


ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ


ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.


ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.


ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.


ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,


ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು