Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಸಮುವೇಲನು ಅವನಿಗೆ - ಯೆಹೋವನು ಈ ಹೊತ್ತು ಇಸ್ರಾಯೇಲ್‍ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇರೀತಿ ಯೆಹೋವನು ಈ ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮ ವ್ಯಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಸಮುಯೇಲನು ಅವನಿಗೆ, “ನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಯೆಹೋವ ದೇವರು ಈ ಹೊತ್ತು ಕಿತ್ತು, ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:28
20 ತಿಳಿವುಗಳ ಹೋಲಿಕೆ  

ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.


ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.


ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.


ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.


ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು


ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.


ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು


ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,


ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ” ಅಂದನು.


ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು.


ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.


ಯೆಹೋವನು ಅವನನ್ನು ಕೊಲ್ಲಿಸಿ, ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.


ಯೆಹೋವನು ನನ್ನ ಸ್ವಾಮಿಯಾದ ನಿನಗೆ ವಾಗ್ದಾನಮಾಡಿರುವ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಲಿ. ನಿನ್ನನ್ನು ಇಸ್ರಾಯೇಲ್ಯರ ಪ್ರಭುವನ್ನಾಗಿ ಮಾಡಿದ ಮೇಲೆ,


ಯೆಹೋವನು ಅವನಿಗೆ, “ನೀನು ಈ ರೀತಿಯಾಗಿ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.


ಯಾವ ವಿಮರ್ಶಕರೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು, ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು