1 ಸಮುಯೇಲ 15:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇಸ್ರಾಯೇಲ್ಯರ ನಿತ್ಯಾಧಾರನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಯಾಕಂದರೆ ಅವನು ಪಶ್ಚಾತ್ತಾಪಪಡ ಮನುಷ್ಯನಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಯೆಹೋವನು ಸರ್ವಕಾಲದಲ್ಲೂ ಇರುವನು. ಯೆಹೋವನು ಸುಳ್ಳಾಡುವುದಿಲ್ಲ; ಆತನು ಮನುಷ್ಯನಂತೆ ಪದೇಪದೇ ಮನಸ್ಸನ್ನು ಬದಲಾಯಿಸುವವನಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು. ಅಧ್ಯಾಯವನ್ನು ನೋಡಿ |