1 ಸಮುಯೇಲ 15:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಸಮುವೇಲನು ಜೀವದಿಂದ ಇರುವವರೆಗೂ ಸೌಲನನ್ನು ನೋಡಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ವಿಷಾದಪಟ್ಟನು. ಸಮುವೇಲನು ಅವನ ಕುರಿತು ದುಃಖಪಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡಲು ಹೋಗಲಿಲ್ಲ. ಸೌಲನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ಸರ್ವೇಶ್ವರ ವಿಷಾದಿಸಿದರು; ಈ ಕಾರಣ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡುವದಕ್ಕೆ ಹೋಗಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪಪಟ್ಟದರಿಂದ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಅನಂತರ ಸಮುವೇಲನು ತನ್ನ ಜೀವಿತದ ಅವಧಿಯಲ್ಲಿ ಸೌಲನನ್ನು ನೋಡಲಿಲ್ಲ. ಸಮುವೇಲನು ಸೌಲನಿಗಾಗಿ ಬಹಳ ದುಃಖಪಟ್ಟನು. ಸೌಲನನ್ನು ಇಸ್ರೇಲರ ರಾಜನನ್ನಾಗಿ ಮಾಡಿದ್ದಕ್ಕೆ ಯೆಹೋವನು ಬಹಳ ಸಂತಾಪಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಸಮುಯೇಲನು ತಾನು ಸಾಯುವ ದಿವಸದವರೆಗೂ ಸೌಲನನ್ನು ತಿರುಗಿ ಕಾಣಲು ಬರಲಿಲ್ಲ. ಸಮುಯೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಮಾಡಿದ್ದಕ್ಕೋಸ್ಕರ ಯೆಹೋವ ದೇವರು ದುಃಖಪಟ್ಟರು. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.