1 ಸಮುಯೇಲ 15:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನು ಕೂಡಿಸಿ ಲೆಕ್ಕಿಸಲು ಎರಡು ಲಕ್ಷ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತು ಸಾವಿರ ಜನರು ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನು ಕೂಡಿಸಿ, ಲೆಕ್ಕ ತೆಗೆದನು. ಅದರಲ್ಲಿ ಎರಡು ಲಕ್ಷಮಂದಿ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತುಸಾವಿರ ಮಂದಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸೌಲನು ತೆಲಾಯೀವಿುನಲ್ಲಿ ಸೈನ್ಯವನ್ನು ಕೂಡಿಸಿ ಲೆಕ್ಕಿಸಲು ಎರಡು ಲಕ್ಷ ಮಂದಿ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತು ಸಾವಿರ ಮಂದಿ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದನು. ಅಲ್ಲಿ ಎರಡು ಲಕ್ಷ ಮಂದಿ ಭೂಸೈನಿಕರಿದ್ದರು ಮತ್ತು ಇತರ ಹತ್ತು ಸಾವಿರ ಮಂದಿ ಜನರಿದ್ದರು. ಯೆಹೂದ್ಯರೂ ಅವರೊಂದಿಗೆ ಸೇರಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಸೌಲನು ತೆಲಾಯಿಮಿನಲ್ಲಿ ಜನರನ್ನು ಕೂಡಿಸಿ, ಲೆಕ್ಕ ಮಾಡಿದನು. ಇಸ್ರಾಯೇಲರ ಕಾಲಾಳುಗಳು ಎರಡು ಲಕ್ಷ ಜನರೂ, ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು. ಅಧ್ಯಾಯವನ್ನು ನೋಡಿ |