Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು, ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು ಜನರೆಲ್ಲರನ್ನು ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರ ಅರಸನಾದ ಅಗಾಗನನ್ನು ಸಜೀವಿಯಾಗಿ ಹಿಡಿದು ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸೌಲನು ಅಮಾಲೇಕ್ಯರ ರಾಜನಾದ ಅಗಾಗನನ್ನು ಜೀವಸಹಿತ ಉಳಿಸಿದನು. ಆದರೆ ಉಳಿದ ಅಮಾಲೇಕ್ಯರನ್ನೆಲ್ಲ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು, ಆದರೆ ಸಮಸ್ತ ಜನರನ್ನು ಖಡ್ಗದಿಂದ ಸಂಪೂರ್ಣ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:8
15 ತಿಳಿವುಗಳ ಹೋಲಿಕೆ  

ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,


ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.


ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ, ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು. ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು.


ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನು ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಬಚ್ಚಿಟ್ಟುಕೊಂಡನು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.


ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.


ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.


ಆಗ ಸೌಲನು ಸಮುವೇಲನಿಗೆ, “ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.


ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.


ಅವರು ಅಮಾಲೇಕ್ಯರಲ್ಲಿ ಉಳಿದವರನ್ನು ಸಂಹರಿಸಿ ಅಲ್ಲೇ ನೆಲೆಸಿದರು.


ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.


ಆಯಿ ಎಂಬ ಪಟ್ಟಣದ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.


ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ, ಶಿಶುಬಾಲಕರನ್ನೂ ದನ, ಕುರಿ, ಕತ್ತೆಗಳನ್ನು, ಕತ್ತಿಯಿಂದ ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು