Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೌಲನೂ ಮತ್ತು ಇಸ್ರಾಯೇಲರೂ ಅಗಾಗನನ್ನೂ, ಉತ್ತಮವಾದ ಕುರಿದನಗಳನ್ನೂ, ಕುರಿಮರಿಗಳನ್ನೂ, ಕೊಬ್ಬಿದ ಪಶುಗಳನ್ನೂ, ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸೌಲನು ಹಾಗು ಇಸ್ರಯೇಲರು ಅಗಾಗನನ್ನು ಮಾತ್ರವಲ್ಲ, ಮೇಲ್ತರದ ಕುರಿದನಗಳನ್ನು, ಕುರಿಮರಿಗಳನ್ನು, ಕೊಬ್ಬಿದ ಪಶುಗಳನ್ನು ಹಾಗು ಶ್ರೇಷ್ಠವಾದ ಎಲ್ಲ ಪದಾರ್ಥಗಳನ್ನು ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲ ನಾಶಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೌಲನೂ ಇಸ್ರಾಯೇಲ್ಯರೂ ಅಗಾಗನನ್ನೂ ಮೇಲ್ತರದ ಕುರಿ ದನಗಳನ್ನೂ ಕುರಿಮರಿಗಳನ್ನೂ ಕೊಬ್ಬಿದ ಪಶುಗಳನ್ನೂ ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡ ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೀಗೆ ಸೌಲನು ಮತ್ತು ಇಸ್ರೇಲ್ ಸೈನಿಕರು ಅಗಾಗನಿಗೆ ಜೀವದಾನ ಮಾಡಿದರು. ಅವರು ಉತ್ತಮ ಕುರಿಗಳನ್ನೂ ದನಗಳನ್ನೂ ಆಡಿನ ಮರಿಗಳನ್ನೂ ಉಳಿಸಿದರು. ಅವರು ಉಪಯುಕ್ತವಾದುದನ್ನು ಉಳಿಸಿ, ಅನುಪಯುಕ್ತವಾದುದನ್ನು ನಾಶಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸೌಲನೂ, ಅವನ ಜನರೂ ಅಗಾಗನನ್ನೂ ಮೇಲ್ತರವಾದ ಕುರಿಗಳನ್ನೂ ದನಗಳನ್ನೂ ಕುರಿಮರಿಗಳನ್ನೂ, ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದರು. ಆದರೆ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:9
10 ತಿಳಿವುಗಳ ಹೋಲಿಕೆ  

ಸೌಲನು, “ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು” ಎಂದು ಉತ್ತರಕೊಟ್ಟನು.


ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.


ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.


ಯೆಹೋವನು ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸಲಿಲ್ಲ” ಎಂದು ಹೇಳಿದನು.


ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು.


ನೀನು ಯೆಹೋವನ ಮಾತನ್ನು ಕೇಳಲಿಲ್ಲ. ಆತನು ಅಮಾಲೇಕ್ಯರ ಮೇಲೆ ಉಗ್ರಕೊಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದ್ದರಿಂದ ಯೆಹೋವನು ಈಗ ನಿನಗೆ ಹೀಗೆ ಮಾಡಿದ್ದಾನೆ.


ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು” ಎಂದು ಹೇಳಿದನು. ಆಗ ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ” ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು.


ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು