1 ಸಮುಯೇಲ 16:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು. ಅಧ್ಯಾಯವನ್ನು ನೋಡಿ |