Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನಂತರ ಸಮುವೇಲನು ಇಷಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ” ಎಂದು ಕೇಳಲು ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು” ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆದುತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅನಂತರ ಸಮುವೇಲನು ಇಷಯನನ್ನು - ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ ಎಂದು ಕೇಳಲು ಅವನು - ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವದಕ್ಕೆ ಹೋಗಿದ್ದಾನೆ ಎಂದು ಉತ್ತರಕೊಟ್ಟನು. ಆಗ ಸಮುವೇಲನು - ಅವನನ್ನು ಕರೇಕಳುಹಿಸು; ಅವನು ಬರುವವರೆಗೂ ನಾವು ಊಟಕ್ಕೆ ಕೂತುಕೊಳ್ಳಬಾರದು ಎಂದು ಹೇಳಲು ಇಷಯನು ಅವನನ್ನು ಕರತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಂತರ ಸಮುವೇಲನು ಇಷಯನನ್ನು, “ನಿನಗೆ ಇರುವ ಮಕ್ಕಳು ಇಷ್ಟೆಯೋ?” ಎಂದು ಕೇಳಿದನು. ಇಷಯನು, “ಇಲ್ಲ, ನನಗೆ ಇನ್ನೊಬ್ಬ ಕಿರಿಯ ಮಗನಿದ್ದಾನೆ. ಅವನು ಕುರಿಮೇಯಿಸುವದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆಕಳುಹಿಸು. ಅವನನ್ನು ಇಲ್ಲಿಗೆ ಬರಹೇಳು. ಅವನು ಬರುವತನಕ ನಾವು ಊಟಕ್ಕೆ ಕುಳಿತುಕೊಳ್ಳುವುದು ಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಮುಯೇಲನು, “ನಿನಗಿರುವ ಮಕ್ಕಳು ಇಷ್ಟೇನೋ?” ಎಂದು ಇಷಯನನ್ನು ಕೇಳಿದನು. ಅದಕ್ಕವನು, “ಇವರೆಲ್ಲರಿಗಿಂತಲೂ ಚಿಕ್ಕವನೊಬ್ಬನು ಉಳಿದಿದ್ದಾನೆ. ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ,” ಎಂದನು. ಆಗ ಸಮುಯೇಲನು ಇಷಯನಿಗೆ, “ಅವನನ್ನು ಕರೆಕಳುಹಿಸು. ಏಕೆಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕುಳಿತುಕೊಳ್ಳಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:11
8 ತಿಳಿವುಗಳ ಹೋಲಿಕೆ  

ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.


ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ಕರೆದುಕೊಂಡು ಬಂದು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.


ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.


ದಾವೀದನು ಜನರ ಸಂಗಡ ಹೀಗೆ ಮಾತನಾಡುತ್ತಿರುವುದನ್ನು ಅವನ ಹಿರಿಯ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿರುವೆ. ನಿನ್ನ ಸೊಕ್ಕು, ತುಂಟತನವು ನನಗೆ ಗೊತ್ತಿದೆ. ನೀನು ಯುದ್ಧವನ್ನು ನೋಡುವುದಕ್ಕೆ ಬಂದಿದ್ದೀ” ಎಂದು ಅವನನ್ನು ಗದರಿಸಿದನು.


ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಸಮುವೇಲನ ಬಳಿಗೆ ಬರಮಾಡಿದರೂ ಅವನು, “ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ” ಎಂದು ನುಡಿದನು.


ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು