1 ಸಮುಯೇಲ 16:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವನು ಕೆಂಬಣ್ಣದವನು, ಸುಂದರ ನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ - ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ ಎಂದು ಆಜ್ಞಾಪಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇಷಯನು ಕಿರಿಯ ಮಗನನ್ನು ಕರೆತರಲು ಒಬ್ಬನನ್ನು ಕಳುಹಿಸಿದನು. ಇವನಾದರೋ ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಮೇಲೆದ್ದು ನಿಲ್ಲು, ಅವನನ್ನು ಅಭಿಷೇಕಿಸು. ಇವನನ್ನೇ ನಾನು ಆರಿಸಿದ್ದು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಇಷಯನು ಅವನನ್ನು ಕರೆಯಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ, ಸುಂದರ ಮುಖವುಳ್ಳವನಾಗಿಯೂ, ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಯೆಹೋವ ದೇವರು ಸಮುಯೇಲನಿಗೆ, “ನೀನೆದ್ದು ಇವನನ್ನು ಅಭಿಷೇಕಿಸು. ಇವನು ಅವನೇ,” ಎಂದರು. ಅಧ್ಯಾಯವನ್ನು ನೋಡಿ |