Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಮುಯೇಲನು ಎಣ್ಣೆ ಇರುವ ಕೊಂಬನ್ನು ತೆಗೆದುಕೊಂಡು, ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಯೆಹೋವ ದೇವರ ಆತ್ಮರು ಕೂಡಲೆ ದಾವೀದನ ಮೇಲೆ ಇಳಿದು ಬಂದರು. ಅನಂತರ ಸಮುಯೇಲನು ಎದ್ದು ರಾಮಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:13
27 ತಿಳಿವುಗಳ ಹೋಲಿಕೆ  

ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.


ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.


ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.


ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ,


ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.


ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ.


ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.


ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು.


ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”


ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.


ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.


ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’


ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು,


ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.


ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.


ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.


ದಾವೀದನ ಕೊನೆಯ ಮಾತುಗಳು - ಇಷಯನ ಮಗನಾದ ದಾವೀದನು, ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು:


ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.


ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.


ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.


ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು