Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸೇವಕರಲ್ಲೊಬ್ಬನು ಅವನಿಗೆ, “ಬೆತ್ಲೆಹೇಮಿನವನಾದ ಜೆಸ್ಸೆಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲನು. ಅವನು ಪರಾಕ್ರಮಶಾಲಿ, ರಣಶೂರ, ವಾಕ್ಚತುರ, ಸುಂದರ ಹಾಗು ಸರ್ವೇಶ್ವರನ ಅನುಗ್ರಹ ಹೊಂದಿದವ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸೇವಕರಲ್ಲೊಬ್ಬನು ಅವನಿಗೆ - ಬೇತ್ಲೆಹೇವಿುನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲವನೂ ಪರಾಕ್ರಮಶಾಲಿಯೂ ರಣಶೂರನೂ ವಾಕ್ಚತುರನೂ ಸುಂದರನೂ ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವನ ಸೇವಕರಲ್ಲಿ ಒಬ್ಬನು, “ಇಷಯ ಎಂಬ ಹೆಸರಿನ ಒಬ್ಬ ಮನುಷ್ಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದಾನೆ. ನಾನು ಇಷಯನ ಮಗನನ್ನು ನೋಡಿದ್ದೇನೆ. ಅವನು ಕಿನ್ನರಿ ಬಾರಿಸುತ್ತಾನೆ. ಅವನು ಧೈರ್ಯಶಾಲಿ ಮತ್ತು ಒಳ್ಳೆಯ ಹೋರಾಟಗಾರ; ಅವನು ಬುದ್ಧಿವಂತನೂ ರಣಶೂರನೂ ರೂಪವಂತನೂ ಆಗಿದ್ದಾನೆ. ಅದಲ್ಲದೆ ಯೆಹೋವನು ಅವನೊಂದಿಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಸೇವಕರಲ್ಲಿ ಒಬ್ಬನು ಅವನಿಗೆ ಉತ್ತರವಾಗಿ, “ವಾದ್ಯ ಬಾರಿಸಲು ನಿಪುಣನಾದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ಕಂಡೆನು. ಅವನು ಧೈರ್ಯಶಾಲಿಯೂ, ಪರಾಕ್ರಮಶಾಲಿಯೂ, ರಣಶೂರನೂ, ವಾಕ್ಚತುರನೂ, ಸುಂದರನೂ ಆಗಿದ್ದಾನೆ. ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:18
16 ತಿಳಿವುಗಳ ಹೋಲಿಕೆ  

ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.


ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.


ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.


ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.


ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.


ಅಬ್ಷಾಲೋಮನು ನಡೆದಿರುವ ಘಟನೆಯಿಂದ ಅರಸನು ಕೋಪಗೊಳ್ಳದೆ ಇರುವಂತೆ ವಿಷಯವನ್ನು ಈ ರೀತಿ ಹೇಳುವಂತೆ ನಿನ್ನ ಸೇವಕನಾದ ಯೋವಾಬನೇ ಇದನ್ನು ಕಲಿಸಿದನು. ಆದರೆ ನನ್ನ ಒಡೆಯನು ದೇವದೂತನಂಥ ಜ್ಞಾನಿ. ಅವನು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವನು” ಎಂದು ಉತ್ತರಕೊಟ್ಟಳು.


ಸೌಲನು ಅವರಿಗೆ, “ಚೆನ್ನಾಗಿ ನುಡಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.


ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿಸಿದನು.


ಸೌಲನ ಕಾಲದಲ್ಲಿ ಯೆಹೂದ ಬೇತ್ಲೆಹೇಮ್ ಎಂಬ ಊರಿನ ಎಫ್ರಾತ್ಯನಾದ ಇಷಯನೆಂಬ ಒಬ್ಬ ವೃದ್ಧನಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನು ಒಬ್ಬನು.


ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು


ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು