Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತರುವಾಯ ಸೌಲನು ಜೆಸ್ಸೆಯನ ಬಳಿಗೆ ದೂತರನ್ನು ಅಟ್ಟಿ, ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲೇ ಸೇವೆಮಾಡಲಿ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಅಟ್ಟಿ ಅವನಿಗೆ - ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ತರುವಾಯ ಸೌಲನು ಇಷಯನಿಗೆ, “ದಾವೀದನು ಇಲ್ಲಿಯೇ ನನ್ನ ಸೇವೆಯಲ್ಲಿ ಇರಲಿ. ನಾನು ಅವನನ್ನು ಬಹಳ ಪ್ರೀತಿಸುತ್ತೇನೆ” ಎಂಬ ಸುದ್ದಿಯನ್ನು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ, “ದಾವೀದನು ನನ್ನ ಸಮ್ಮುಖದಲ್ಲಿ ಸೇವೆಮಾಡಲಿ. ಏಕೆಂದರೆ ನಾನು ದಾವೀದನನ್ನು ಮೆಚ್ಚಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:22
7 ತಿಳಿವುಗಳ ಹೋಲಿಕೆ  

ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.


ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.


ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು.


ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.


ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.


ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು.


ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು